ಉಡುಪಿ: ಹೋಟೆಲ್ ಕಾರ್ಮಿಕನೊಬ್ಬನನ್ನು ಬಿಯರ್ ಬಾಟಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.
ಗಾಜಿನಿಂದ ಕುತ್ತಿಗೆ ಕೊಯ್ದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಣಿಪಾಲ ಅನಂತ ಕಲ್ಯಾಣನಗರ ಹತ್ತಿರ ಮೃತದೇಹ ಪತ್ತೆಯಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಕೇರಳ ಕಾಸರಗೋಡಿನ ಶ್ರೀಧರ್ ನಾಯಕ ಎಂದು ಗುರುತಿಸಲಾಗಿದೆ.
ಮಣಿಪಾಲದ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಬೆಳಗ್ಗೆ ಬಾಡಿಗೆ ಮನೆಯಿಂದ ಹೋಟೆಲ್ ಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ಎಂದು ಶಂಕಿಸಲಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.