ಅಸಮರ್ಪಕ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಭಾರಿ ದಂಡ
ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಸಮರ್ಪಕ ಮೌಲ್ಯಮಾಪನದ ಕುರಿತು ಕೇಳಿದ ಇಂದಿನ ವಿಧಾನಸಭಾ ಕಲಾಪದಲ್ಲಿ ಸದಸ್ಯರೊಬ್ಬರಿಉ ಕೆಳಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿದರು.
ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. 19 ಸಾವಿರ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಮಾಡಿದ 4 ಸಾವಿರದ 317 ಶಿಕ್ಷಕರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದರು.
6 ರಿಂದ 10 ಅಂಕಗಳನ್ನು ವ್ಯತ್ಯಾಸ ಮಾಡಿದ ಶಿಕ್ಷಕರಿಗೆ ಎಚ್ಚರಿಕೆ ನೀಡಲು ನಿರ್ಧರಿಸಲಾಗಿದೆ. 11 ರಿಂದ 20 ಅಂಕಗಳನ್ನು ವ್ಯತ್ಯಾಸ ಮಾಡಿದ ಶಿಕ್ಷಕರಿಗೆ ಮುಂದಿನ 2 ಪರೀಕ್ಷೆಗಳ ಮೌಲ್ಯಮಾಪನಕ್ಕೆ ಅವಕಾಶ ನೀಡದಂತೆ ಅಮಾನತು ಮಾಡಲಾಗಿದೆ. ಇನ್ನು 25 ಕ್ಕಿಂತ ಹೆಚ್ಚು ಅಂಕ ವ್ಯತ್ಯಾಸ ಮಾಡಿದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಆ ಕುರಿತು ಸಮಾಲೋಚನೆ ನಡೆಸುತ್ತಿದ್ದೇವೆ ಎಂದು ಬಿ.ಸಿ. ನಾಗೇಶ್ ಹೇಳಿದರು.