ಪುತ್ತೂರಿನಲ್ಲಿ ಮುಖಂಡ ಅರುಣ್ ಪುತ್ತಿಲ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.
ಹಿಂದೂ ನಾಯಕರಾಗಿ ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈ ತಪ್ಪಿದೆ ಎಂದು ತೀವ್ರ ಅಸಮಾಧಾನಗೊಂಡ ಕಾರ್ಯಕರ್ತರು ತುರ್ತು ಸಭೆ ಕರೆದಿದ್ದರು. ಈ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪುತ್ತಿಲ ಅಭಿಮಾನಿಗಳು ಹಾಗೂ ಹಿಂದೂ ಕಾರ್ಯಕರ್ತರು ಸೇರಿದ್ದರು. ಈ ಈ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.
ಕಾರ್ಯಕರ್ತರ ಒತ್ತಾಯದ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಏ. 17ರಂದು ನಾಮಪತ್ರ ಸಲ್ಲಿಸಿದ್ದಾರೆ. ಅಂದು 9ಕ್ಕೆ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಅರುಣುಕಮಾರ್ ತಿಳಿಸಿದ್ದಾರೆ.








