ಅಮೆರಿಕಾದ ನ್ಯೂಯಾರ್ಕ್ ನೈಟ್ ಕ್ಲಬ್‌ನಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿ ಹೊಸ ವರ್ಷಾಚರಣೆ ಸಂಭ್ರಮದ ವೇಳೆ ನಡೆದ ಮೂರನೇ ದಾಳಿಯಾಗಿದ್ದು, ಈ ಘಟನೆಯಿಂದ ನ್ಯೂಯಾರ್ಕ್ ನಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ದಾಳಿಯನ್ನು ಭಯೋತ್ಪಾದಕರ ಗುಂಪು ಯೋಜಿತವಾಗಿ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ದಾಳಿಯಾದ ಸ್ಥಳದಲ್ಲಿ ಹಲವು ಗುಂಡುಗಳು ಪತ್ತೆಯಾಗಿದ್ದು, ಘಟನೆಯ ಬಗೆಗೆ ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.
ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರು ಜೀವ ಉಳಿಸಲು ಹೋರಾಟ ನಡೆಸುತ್ತಿದ್ದಾರೆ. ಈ ದಾಳಿಯು ಹೊಸ ವರ್ಷಾಚರಣೆಯ ಮೋಜು ಮಸ್ತಿಯಲ್ಲಿ ತೊಡಗಿದ್ದ ನೂರಾರು ಜನರನ್ನು ಬೆಚ್ಚಿಬೀಳಿಸಿದೆ.
ಸ್ಥಳೀಯ ಪೊಲೀಸರು ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ನೈಟ್ ಕ್ಲಬ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಹೆಚ್ಚಿನ ಮಾಹಿತಿಗಳನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








