ಟೆಲ್ ಅವೀವ್: ಗಾಜಾದ ಅಲ್ ಶಿಫಾ ಆಸ್ಪತ್ರೆ ಹಮಾಸ್ (Hamas) ಉಗ್ರರ ಅಡಗುತಾಣವಾಗಿತ್ತು ಎಂದು ಇಸ್ರೇಲ್ (Israel) ಮೊದಲಿಂದ ಹೇಳುತ್ತಾ ಬಂದಿತ್ತು. ಭಯೋತ್ಪಾದಕ ಚಟುವಟಿಕೆಗಳಿಗೆ ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಆಸ್ಪತ್ರೆಗಳನ್ನು ಹಮಾಸ್ ಬಳಸುತ್ತದೆ ಎಂಬ ವಿಷಯಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಇಸ್ರೇಲ್ ಹೇಳಿದೆ.
ಅಲ್ ಶಿಫಾ ಆಸ್ಪತ್ರೆಯ (Al-Shifa Hospital) ಎಂಆರ್ ಐ ಯೂನಿಟ್‌ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಬ್ಯಾಗ್‌ಗಳಲ್ಲಿ ಎಕೆ 47, ಗ್ರೆನೇಡ್ ಸೇರಿ ಹಲವು ಶಸ್ತ್ರಾಸ್ತ್ರ ಸಿಕ್ಕಿವೆ ಎನ್ನಲಾಗಿದೆ. ಅಲ್ ಶಿಫಾ ಆಸ್ಪತ್ರೆಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇಸ್ರೇಲ್, ಆಸ್ಪತ್ರೆ ಜಾಲಾಡುತ್ತಿದೆ. ಬುಲ್ಡೋಜರ್‌ಗಳು ದಕ್ಷಿಣ ಭಾಗದ ಗೇಟ್ ಅನ್ನು ಧ್ವಂಸ ಮಾಡಿದೆ. ಉಗ್ರರ ಸುರಂಗಗಳನ್ನು ಪತ್ತೆ ಹಚ್ಚಲು ಇಸ್ರೇಲ್ ಪಡೆಗಳು ಬುಲ್ಡೋಜರ್ ಅಸ್ತ್ರವನ್ನು ಪ್ರಯೋಗಿಸಿವೆ.