ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಭಾರಿ ಇಳಿಕೆ Saaksha Tv
ನವದೆಹಲಿ: ರಾಷ್ಟ್ರೀಯ ತೈಲ ಮಾSರುಕಟ್ಟೆ ಕಂಪನಿಗಳು ಜನಸಾಮಾನ್ಯರಿಗೆ ಸಿಹಿ ಸುದ್ದಿಯೊಂದು ನೀಡಿವೆ. ಎಲ್‌ಪಿಜಿ ಸಿಲಿಂಡರ್ಗಳ ಬೆಲೆಯನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಸಿವೆ.
ಫೆಬ್ರವರಿ 1ರಿಂದ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ. ಕೇಂದ್ರ ಹಣಕಾಸು ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಸಲಾಗಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್ನ ಬೆಲೆಯನ್ನು ನೂರು ರೂಪಾಯಿಗಳ ಕಡಿತ ಮಾಡಲಾಗಿತ್ತು. ಈಗ ಸುಮಾರು 91 ರೂಪಾಯಿ ಕಡಿತಗೊಳಿಸಲಾಗಿದ್ದು, 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ತಳಿಸಿದೆ.









