ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತ ನಾಲ್ವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಈ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತರು. ಅಸ್ವಸ್ಥಗೊಂಡ ನಾಲ್ವರು ರೈತರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. 1 ಕೋಟಿ 93 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.
ಕಳೆದ 18 ತಿಂಗಳಿಂದ ಹಣ ನೀಡದೆ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದಾರೆ. ಬಾಕಿ ಹಣ ನೀಡದಿದ್ದರೆ ಇನ್ನುಳಿದವರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.