ಬೀದರ್: ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಜಮೀನು ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಬಲೆ ಬೀಸಿದ್ದಾರೆ.
6 ಜನ ಆರೋಪಿಗಳು ಬೀದರ್ ಜಿಲ್ಲೆಯವರೇ ಎನ್ನಲಾಗಿದೆ. ಕಣ್ಣಿಗೆ ಖಾರದಪುಡಿ ಎರಚಿ, ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಂಧಿತರಿಂದ ಕಾರು, ಖಾರದ ಪುಡಿ ಹಾಗೂ ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಲೆಗೆ 5 ಲಕ್ಷ ರೂ. ನೀಡಿ ಜಮೀನು ಮಾಲೀಕ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ.
ಜಾಬ್ ಶೆಟ್ಟಿ ಎಂಬ ವಕೀಲನ ಮೇಲೆಯೇ ಹಲ್ಲೆ ನಡೆದಿದೆ.