ಬಳ್ಳಾರಿ : ಇಲ್ಲಿನ ಎಎಸ್ ಎಂ ಮಹಿಳಾ ವಿದ್ಯಾಲಯದ (ASM Womens College) ಪ್ರಾಂಶುಪಾಲ (College Principal) ಶರಣಪ್ಪ, ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಅವರನ್ನು ಅಮಾನತು ಮಾಡಲಾಗಿದೆ.
ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ ನೊಂದ ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ (Women’s Police Station) ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತ್ತು. ಹೀಗಾಗಿ ಘಟನೆ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಆರ್. ರಾಮನಗೌಡ ಅವರ ಅಧ್ಯಕ್ಷತೆಯಲ್ಲಿ ತುರ್ತು ಕಾರ್ಯಕಾರಿ ಸಭೆ ನಡೆಸಿ ಶರಣಪ್ಪ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ವಿಚಾರಣೆ ಪೂರ್ತಿ ಆಗುವವರೆಗೂ ಶರಣಪ್ಪನನ್ನ ಅಮಾನತಿನಲ್ಲಿಡಲು ಆಡಳಿತ ಮಂಡಳಿ ನಿರ್ಧಾರ ಮಾಡಿದೆ.