ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಹತ್ತಿರ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಅತ್ತೆ ಹಾಗೂ ಸೊಸೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ನೆಲಮಂಗಲ ಟೌನ್ ನಿವಾಸಿ ಬೀರಮ್ಮ(64) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸೊಸೆ ಮಮತಾ ಗಾಯಗೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತೆ ಹಾಗೂ ಸೊಸೆ ಸಂಬಂಧಿಕರ ಮನೆಯಿಂದ ಮರಳಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.