ಚಿತ್ರದುರ್ಗ: ಲಾರಿಯೊಂದು ಟ್ರ್ಯಾಕ್ಟರ್ ನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಲಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿದ್ದಾರೆ. ಈ ಘಟನೆ ಹಿರಿಯೂರಿನ ಕೆ.ಆರ್ ಹಳ್ಳಿಯ ಹತ್ತಿರ ನಡೆದಿದೆ. ಮಂಜಣ್ಣ (45) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಡಿಕೆ ಕೊಯ್ಯುವ ಕೆಲಸಕ್ಕೆಂದು 9 ಜನ ಕಾರ್ಮಿಕರು ಟ್ರಾಕ್ಟರ್‌ನಲ್ಲಿ ಹಿರಿಯೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಂಜಣ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಚಾಲಕನ ಅತೀ ವೇಗವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








