ಹಸುಗಳನ್ನು ತುಂಬಿಕೊಂಡು ಹೊರಟಿದ್ದ ಲಾರಿ ಪಲ್ಟಿಯಾದ ಪರಿಣಾಮ 40 ಹಸುಗಳು ಹಾಗೂ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಅನಂತಪರಂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಸುಗಳೊಂದಿಗೆ ಚಾಲಕ ಹಾಗೂ ಕ್ಲೀನರ್ ಕೂಡ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ಕ್ರೇನ್ಗಳ ಸಹಾಯದಿಂದ ಜಾನುವಾರುಗಳ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡು ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ.