ರಾಮನಗರ: ಕಾಮುಕನೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ನಡೆದಿದೆ.
ಈ ಘಟನೆ ಮಾಗಡಿ ಪೊಲೀಸ್ (Magadi Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ (Bengaluru) ಗೌರಿಪಾಳ್ಯದ ಇರ್ಫಾನ್ ಖಾನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಇರ್ಫಾನ್ ಸಂತ್ರಸ್ತ ಬಾಲಕಿಯ ಸಂಬಂಧಿಕ. ಹೀಗಾಗಿ ಆಗಾಗ ಅವರ ಮನೆಗೆ ಬಂದು ಹೋಗುತ್ತಿದ್ದ. ಜುಲೈ 20ರಂದು ಕೂಡ ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್‌ನಲ್ಲಿ ಕರೆದೊಯ್ದಿದ್ದಾನೆ. ಗಾಬರಿಯಾದ ಕುಟುಂಬಸ್ಥರಿಗೆ ಆತ ಕರೆದುಕೊಂಡು ಹೋಗಿರುವುದು ಗೊತ್ತಾಗಿದೆ. ಆತನನ್ನು ವಿಚಾರಿಸಿದಾಗ ನನಗೇನು ಗೊತ್ತಿಲ್ಲ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ.
ಇದರಿಂದ ಅನುಮಾನಗೊಂಡ ಪೋಷಕರು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ತನಿಖೆಗೆ ಇಳಿದ ಪೊಲೀಸರುಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ. ಆನಂತರ ಬೆಂಗಳೂರು-ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿ ಬಳಿ ಪೊದೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನೆ ಖಂಡಿಸಿ ಮಾಗಡಿಯ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ, ಇಲ್ಲದಿದ್ದರೆ ಎನ್‍ಕೌಂಟ್ ಮಾಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.








