ಸಾವೆಂದು ತಿಳದಿದ್ದ ಪ್ರಕರಣಕ್ಕೆ ಸಿಕ್ತು ಬಿಕ್ ಟ್ವೀಸ್ಟ್
ಛತ್ತೀಸ್‍ಗಢ : ದುಷ್ಕರ್ಮಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಕಬ್ಬಿಣ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.
56 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಿಶನ್ ಯಾದವ್ (31) ಹತ್ಯೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಮಹಳೆ ಮೊದಲು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಜಾಂಜ್ಗೀರ್-ಚಂಪಾ ಜಿಲ್ಲೆಯ ಪೊಲೀಸರು ಭಾವಿಸಿದ್ದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರವೆಸಗಿ, ಕಳೆದ ಬುಧವಾರ ಬಹಳ ಕ್ರೂರವಾಗಿ ಥಳಿಸಿ ಹತ್ಯೆಗೈಯಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ತಿರುವು ಪಡೆದುಕೊಂಡಿದ್ದು, ಈ ಸಂಬಂಧ ಪೋಲಿಸರು ತನಿಕೆಯನ್ನು ಆರಂಭಿಸಿದ್ದಾರೆ. ಪ್ರಕರಣದ ಜಾಡು ಹಿಡದು ಹೊರಟ ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳ ನ್ನು ಪರಿಶೀಲಿಸಿದಾಗ ಆಕೆಯ ಹೊಟ್ಟೆಗೆ ಒದ್ದು, ಕಣ್ಣಿಗೆ ಹೊಡೆದು ಕಬ್ಬಿಣದ ರಾಡ್‍ನಿಂದ ಯಾರೋ ಅಮಾನುಷವಾಗಿ ಹಲ್ಲೆ ನಡೆಸಿ ರಸ್ತೆಯಲ್ಲಿ ಎಳೆದೊಯ್ದಿರುವುದು ಕಂಡು ಬಂದಿದೆ.
ಸಧ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಸಂತ್ರಸ್ತೆ ಅತ್ಯಚಾರ ವಿರೋಧಿಸಿದರೂ ಆರೋಪಿ ಆಕೆಯ ಕೂದಲನ್ನು ಹಿಡಿದು ಧರಧರನೇ ಎಳೆದುಕೊಂಡು ಸಮೀಪದಲ್ಲಿದ್ದ ಪ್ಲಾಟ್‍ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.








