ಆನೇಕಲ್: ತನ್ನ ಪತ್ನಿಯನ್ನೇ ಕೊಲೆ ಮಾಡಿದ ವ್ಯಕ್ತಿಯೊಬ್ಬ ಮತ್ತೊಂದು ಮದುವೆಗೆ ಸಿದ್ಧನಾಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಈ ಪ್ರಕರಣ ಬೆಂಗಳೂರಿನದ್ದಾಗಿದ್ದು, ಆರೋಪಿಯನ್ನು ಮದುವೆ ಮನೆಯಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸರು (Police) ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ (Bihar) ಮೂಲದ ಮಹಮದ್ ನಸೀಮ್ (39) ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ರುಮೇಶ್ ಖಾತುನ್ (22) ರನ್ನು ಕೊಲೆ ಮಾಡಿದ್ದ. ಕೊಲೆ ಮಾಡಿ ಕೈ, ಕಾಲು ಕಟ್ಟಿ, ಚರಂಡಿಗೆ ಎಸೆದಿದ್ದ ಎನ್ನಲಾಗಿದೆ. ಆನಂತರ ತಲೆ ಮರೆಸಿಕೊಂಡು ಬಿಹಾರದಲ್ಲಿ ಇದ್ದ.
ಈ ಪ್ರಕರಣ ಬೇಧಿಸಿದ ಪೊಲೀಸರು ಬಿಹಾರದಲ್ಲಿ ಆರೋಪಿ ಇರುವುದನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಮೂರನೇ ಮದುವೆಗೆ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ. ಆರೋಪಿಯು ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ಎನ್ನಲಾಗಿದೆ.