7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾದ ಭೂಪ Saaksha Tv
ನವದೆಹಲಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯೊಬ್ಬನನ್ನು ಪೊಳೀಸರು ಬಂಧಿಸಿದ್ದಾರೆ.
ವ್ಯಕ್ತಿ 48 ವರ್ಷಗಳಲ್ಲಿ ಏಳು ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದನು. ಈತನನ್ನು ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಒಡಿಶಾದ ಕೇಂದ್ರಪಾರ ಜಿಲ್ಲೆಯ ಪಟ್ಕುರಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ನಿವಾಸಿಯಗಿದ್ದು, 1982 ರಲ್ಲಿ ಆರೋಪಿ ಮೊದಲ ಬಾರಿಗೆ ಮದುವೆಯಾದನು. ನಂತರ 2002ರಲ್ಲಿ ಎರಡನೇ ಬಾರಿಗೆ ಮತ್ತೊಂದು ವಿವಾಹವಾದನು. ತನ್ನ ಎರಡು ಪತ್ನಿಯರಿಂದ ಐದು ಮಕ್ಕಳಿಗೆ ತಂದೆಯಾಗಿದ್ದನು. 2002 ಮತ್ತು 2020ರ ನಡುವೆ ಮತ್ತೆ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ಇತರ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿ ವಿವಾಹವಾಗಿದ್ದಾನೆ ಎಂದು ಭುವನೇಶ್ವರ ಪೊಲೀಸ್ ರು ತಿಳಿಸಿದ್ದಾರೆ.
ಆರೋಪಿ ಇಲ್ಲಿಯವರೆಗೂ ದೆಹಲಿ, ಪಂಜಾಬ್, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾ ಸೇರಿದಂತೆ ಏಳು ರಾಜ್ಯಗಳಲ್ಲಿ ಮಹಿಳೆಯರನ್ನು ವಂಚಿಸಿದ್ದಾನೆ. ಕೊನೆಯದಾಗಿ ಈತ ಶಾಲಾ ಶಿಕ್ಷಕಿಯೊಬ್ಬರನ್ನು ಮದುವೆಯಾಗಿ ದೆಹಲಿಯಲ್ಲಿ ತಂಗಿದ್ದ, ಆದರೆ ಆಕೆ ಹೇಗೋ ಸತ್ಯ ತಿಳಿದು ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ತಾನು ಸರ್ಕಾರಿ ಉದ್ಯೋಗಿ ಎಂದು ಬಿಂಬಿಸಿಕೊಂಡು ಅನೇಕ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮದುವೆಯಾಗುತ್ತಿದ್ದ. ಅದರಲ್ಲಿಯೂ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿರುವ ವಿಚ್ಛೇದಿತ ಮಹಿಳೆಯರ ಜೊತೆ ಸ್ನೇಹ ಬೆಳೆಸಿ ವಿವಾಹವಾಗಿ, ನಂತರ ಅವರನ್ನು ಬಿಟ್ಟು ಹೋಗುವ ಮುನ್ನ ಹಣದೋಚಿ ಪರಾರಿಯಾಗುತ್ತಿದ್ದ. ಸದ್ಯ ಆರೋಪಿಯ ಕೊನೆಯ ಪತ್ನಿ 2018 ರಲ್ಲಿ ತನ್ನನ್ನು ನವದೆಹಲಿಯಲ್ಲಿ ಮದುವೆಯಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದು, ಕಳೆದ ವರ್ಷ ಜುಲೈನಲ್ಲಿ ಶಾಲಾ ಶಿಕ್ಷಕಿ ಮಹಿಳಾ ಪೊಲೀಸರಿಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದೀಗ ಶಿಕ್ಷಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಜೊತೆಗೆ ಆತನ ಬಳಿಯಿದ್ದ 11 ಎಟಿಎಂ ಕಾರ್ಡ್ಗಳು, ನಾಲ್ಕು ಆಧಾರ್ ಕಾರ್ಡ್ಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ