ಬೆಂಗಳೂರು: ನಗರದಲ್ಲಿನ ಮಾಲ್ ವೊಂದರಲ್ಲಿ (Mall) ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದ ಪ್ರಕರಣವೊಂದು ನಡೆದಿತ್ತು. ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ.
ಬಸವೇಶ್ವರನಗರದ (Basaveshwara Nagar) ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ ಎಂದು ಗುರುತಿಸಲಾಗಿದೆ. ಈತ ಮಾಲ್‌ವೊಂದರಲ್ಲಿ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂದರ್ಭದಲ್ಲಿ ಯಶವಂತ್ ಎಂಬುವವರು ವಿಡಿಯೋ ಚಿತ್ರೀಕರಿಸಿದ್ದರು. ಇದು ವೈರಲ್ ಆಗುತ್ತಿದ್ದಂತೆ ಮಾಲ್ ಮ್ಯಾನೇಜರ್ ಆರೋಪಿ ವಿರುದ್ಧ ಕೇಸ್ ದಾಖಲಿಸಿದ್ದರು.
ಹೀಗಾಗಿ ಪೊಲೀಸರು ವಿಡಿಯೋ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ. ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸಿ ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ ಎನ್ನಲಾಗಿದೆ. ಆರೋಪಿ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಸದ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.








