ಬೆಂಗಳೂರು: ವ್ಯಕ್ತಿಯೊಬ್ಬ ಪೊಲೀಸ್ ಪೇದೆಯೊಂದಿಗೆ ಜಗಳ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜು ಎಂಬಾತನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಶನಿವಾರ ರಾತ್ರಿ ಉತ್ತರಹಳ್ಳಿ ಹತ್ತಿರದ ಹರೇಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್ ನಲ್ಲಿ ಪಕ್ಕಕ್ಕೆ ಹೋಗುವಂತೆ ಹೇಳಿದ್ದಕ್ಕೆ ಕೋಪಗೊಂಡ ರಾಜು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೋಪಗೊಂಡ ಕಾನ್ಸ್ ಟೇಬಲ್ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು.
ನಂತರ ಪೊಲೀಸ್ ಕೂಡ ಹಲ್ಲೆ ಮಾಡಿದ್ದಾರೆ. ರಸ್ತೆಯಲ್ಲಿಯೇ ಇಬ್ಬರು ಕೈ ಕೈ ಮಿಲಾಯಿಸಿದ್ದಾರೆ. ನಂತರ ರಾಜು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.