ಚಿಕ್ಕೋಡಿ: ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಖಾಸಗಿ ಎಲೆಕ್ಟ್ರಿಷಿಯನ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಾಲೂಕಿನ ಹೊಸಪೇಟೆಯಲ್ಲಿ ನಡೆದಿದ್ದು, ದಫೇದರ್‌ಕೋಡಿ ನಿವಾಸಿ ಸಿದ್ದರಾಮ ಕುಪವಾಡೆ (38) ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ಕೆಳಗೆ ನಿಂತಿ, ಇವರನ್ನು ಮೇಲೆ ಹತ್ತಿಸಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೀಗಾಗಿ ಸ್ಥಳೀಯರು ಹೆಸ್ಕಾಂ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.








