ಮೀನು ಹಿಡಿಯಲು ಸ್ನೇಹಿತನ ಜೊತೆ ಬಲವಂತದಿಂದ ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾರನಾಳ ಕೆರೆಯಲ್ಲಿ ನಡೆದಿದೆ.
ಸ್ನೇಹತರಿಬ್ಬರು ಮೀನು ತಿನ್ನುವ ಆಸೆಯಿಂದಾಗಿ ಮನೆಯವರಿಗೆ ಹೇಳದೆ ಕೆರೆಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋಗಿದ್ದಾರೆ. ಇಬ್ಬರೂ ಸಂಜೆಯಾದ ನಂತರ ಮೀನು ಹಿಡಿಯಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ತೆಪ್ಪ ಮುಗುಚಿ ಬಿದ್ದಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿ ರಕ್ಷಿಸುವ ಕಾರ್ಯ ಆರಂಭಿಸಿದ್ದಾರೆ. ಆದರೆ, ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬ ಯುವಕ ಸಾವನ್ನಪ್ಪಿದ್ದಾನೆ.
ರಕ್ಷಿಸಲಾಗಿದ್ದ ಯುವಕ ಹೆದರಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕತ್ತಲಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆದರೆ, ಶವ ಸೋಮವಾರ ಬೆಳಿಗ್ಗೆ ಮೀನಿನ ಬಲೆಗೆ ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.






