ಕಲಬುರಗಿ: ಶಾಸಕರ ಮನೆಯಲ್ಲಿ ಕೆಲಸಗಾರನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೇವರ್ಗಿ (Jewargi) ಶಾಸಕ ಡಾ. ಅಜಯ್ ಸಿಂಗ್ (Ajay Singh) ನಿವಾಸದಲ್ಲಿಯೇ ಈ ಘಟನೆ ನಡೆದಿದೆ.
ಮನೆ ಕೆಲಸದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಲಬುರಗಿ (Kalaburagi) ನಗರದ ಮನೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ವ್ಯಕ್ತಿಯನ್ನು ದೇವೇಂದ್ರ ಪಟ್ಟೆದಾರ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದರೂ ನಿಖರ ಕಾರಣ ಗೊತ್ತಾಗಿಲ್ಲ. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ನೀಡಿರುವ ಡಿಸಿಪಿ ಅಡ್ಡೂರು ಶ್ರೀನಿವಾಸಲು, ಅಜಯ್ ಸಿಂಗ್ ಅವರ ಮನೆಯಲ್ಲಿ ಕೆಲಸದಾತ ದೇವೇಂದ್ರನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಫ್‌ಎಸ್‌ಎಲ್ ತಂಡದವರು, ನಮ್ಮ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರ ಎಂದು ಹೇಳಿದ್ದಾರೆ.