ಮಕ್ಕಳಿಗೆ ನೀಡುತ್ತಿರುವ ಲಸಿಕಾಭಿಯಾನದಲ್ಲಿ ಮೈಲಿಗಲ್ಲು Saaksha Tv
ನವದೆಹಲಿ: ಕೊರೊನಾ ಮೂರನೆ ಅಲೆ ಸೋಂಕು ಹೆಚ್ಚಾಗಿ ಮಕ್ಕಳಿಗೆ ತಗಲುತ್ತಿದ್ದು, ಇದನ್ನು ತೆಡಯುವ ನಿಟ್ಟಿನಲ್ಲಿ ಭಾರತ ಸರಕಾರ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಪ್ರಾರಂಭಿಸಿತ್ತು. ನಿನ್ನೆ 15 ರಿಂದ 18 ವರ್ಷದ ಶೇ50 ಪ್ರತಿಶತದಷ್ಟು ಮಕ್ಕಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಮನುಷ್ಕ ಮಾಂಡವೀಯಾ ಟ್ವಿಟ್ ಮಾಡಿದ್ದಾರೆ.
ಇನ್ನೂ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,82,970 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಹಾಗೇ 441 ಜನ ಸಾವನ್ನಪ್ಪಿದ್ದಾರೆ. ಮತ್ತು 1,88,157 ಜನ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.









