ಹಾವೇರಿ: ಈಜಲು ಹೋಗಿದ್ದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಮೋಘ ಹೊಸಮಣಿ(17) ಸಾವನ್ನಪ್ಪಿದ ದುರ್ದೈವಿ. ನದಿಯಲ್ಲಿ ಈಜಲು ಹೋಗಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವರದಾ ನದಿಯಲ್ಲಿ ಸ್ನೇಹಿತರೊಂದಿಗೆ ಸ್ನಾನ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.