ಬೀದರ್: ಅಪ್ರಾಪ್ತ ಬಾಲಕನೊಬ್ಬ ವೃದ್ಧೆಗೆ ಚಾಕು ಇರಿದಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಕಳ್ಳತನಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕ ವಯೋವೃದ್ಧೆಗೆ ಚಾಕು ಇರಿದಿದ್ದಾನೆ. ಈ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಪಂಚಾಳ ಹಲ್ಲೆಗೊಳಗಾದ ವಯೋವೃದ್ಧೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕಳ್ಳತನಕ್ಕೆ ಹೋಗಿದ್ದಾನೆ. ಆಗ ವೃದ್ಧೆ ಅಡ್ಡಿಪಡಿಸಿದ್ದಾಳೆ. ಹೀಗಾಗಿ ನಾಗಮ್ಮ ಪಂಚಾಳ ಎಂಬುವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಸದ್ಯ ಬ್ರೀಮ್ಸ್ ಆಸ್ಪತ್ರೆಯಲ್ಲಿ ವಯೋವೃದ್ಧೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.








