ಮಹಿಳೆಯೊಬ್ಬರು ರೈಲು ನಿಲ್ದಾಣದಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಮಹಿಳೆಯರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಇಳಿದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಷ್ಟರಲ್ಲಿಯೇ ಹೆರಿಗೆಯಾಗಿದೆ. ಮೂಲತಃ ಕಲಬುರಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ಎನ್ನಲಾಗಿದೆ. ಅವರು 8 ತಿಂಗಳ ಗರ್ಭಿಣಿಯಾಗಿದ್ದರು. ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.
ಚಿತ್ತಾಪುರ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಸಂಬಂಧಿಕರೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೂಡಲೇ ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದರು. ಹೀಗಾಗಿ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾಳೆ. ಈ ಮಹಿಳೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.