ಬೆಂಗಳೂರು: ಹೆತ್ತ ಮಕ್ಕಳಿಬ್ಬರನ್ನು ತಾಯಿಯೇ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಈ ಘಟನೆ ಇಲ್ಲಿಯ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸುಭಂ (7), ಸಿಯಾ (3) ಕೊಲೆಯಾಗಿರುವ ದುರ್ದೈವಿ ಮಕ್ಕಳು. ಮಹಿಳೆ ಮೊದಲು ಟೈನ್ ದಾರದಿಂದ ಕತ್ತು ಹಿಸುಕಿ ಮಕ್ಕಳಿಬ್ಬರ ಕೊಲೆ ಮಾಡಿದ್ದಾಳೆ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಡನೊಂದಿಗೆ ಜಗಳ ಮಾಡಿಕೊಂಡು ನಂತರ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ ಹೆಂಡತಿ ನಡುವೆ ಮನಸ್ತಾಪ ಇದ್ದ ಕಾರಣಕ್ಕೆ ಪತಿಯ ಮೇಲಿನ ಕೋಪಕ್ಕೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.