ಬೆಳಗಾವಿ: ತಾಯಿಯೊಬ್ಬಳು(Mother) ತನ್ನ ಮೂವರು ಮಕ್ಕಳನ್ನು ಬಿಟ್ಟು 40 ವರ್ಷದ ವ್ಯಕ್ತಿಯ ಜೊತೆಗೆ ಓಡಿ ಹೋಗಿರುವ ಘಟನೆಯೊಂದು ನಡೆದಿದೆ. ಹೀಗಾಗಿ ತಾಯಿಯ ಮನವೊಲಿಸುವಂತೆ ಮಕ್ಕಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬೆಳಗಾವಿಯ (Belagavi) ನಗರದ ಗಣೇಶಪುರದಲ್ಲಿ ಈ ಘಟನೆ ನಡೆದಿದೆ. ತಾಯಿಗಾಗಿ ಮಕ್ಕಳು ಬೆಳಗಾವಿ ಕ್ಯಾಂಪ್ ಪೊಲೀಸರ (Police) ಮೊರೆ ಹೋಗಿದ್ದಾರೆ. ಮಹಿಳೆ ಮಕ್ಕಳನ್ನೆಲ್ಲ ಬಿಟ್ಟು ಕಳೆದ ತಿಂಗಳು ಓಡಿ ಹೋಗಿ ಜೀವನ ನಡೆಸುತ್ತಿದ್ದಾಳೆ. ಸರ್ಕಾರಿ ನೌಕರಿಯಲ್ಲಿದ್ದ ಪತಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದಳು. ತಾಯಿಯ ಆಶ್ರಯದಲ್ಲಿದ್ದ ಮಕ್ಕಳು ಈಗ ಬೀದಿಗೆ ಬಂದಿದ್ದಾರೆ.
ಹೀಗಾಗಿ ಮಕ್ಕಳು ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ತಾಯಿ ಬೇರೊಬ್ಬನ ಜೊತೆಗೆ ನೆಲೆಸಿದ್ದಾಳೆ ಎಂಬ ವಿಚಾರ ಗೊತ್ತಾಗಿದೆ. ಇನ್ನೊಂದೆಡೆ ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಕೂಡ ಮಕ್ಕಳನ್ನು ಹೊರಗೆ ಹಾಕಿದ್ದಾರೆ ಎನ್ನಲಾಗಿದೆ. ತಾಯಿ ಬಂದರೆ ನಾವೇ ಶಾಲೆ, ಕಾಲೇಜು ಬಿಟ್ಟು ಕೆಲಸಕ್ಕೆ ಹೋಗಿ ಸಾಕುತ್ತೇವೆ ಎಂದು ಮಕ್ಕಳು ಕೇಳಿಕೊಳ್ಳುತ್ತಿದ್ದಾರೆ.