ರಾಮನಗರ: ತಾಯಿಯೊಬ್ಬರು ಲಕ್ಷ್ಮಣ ರೇಖೆ ಔಷಧಿ ಸೇವಿಸಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ರಾಮನಗರ (Ramanagara) ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂರು ವರ್ಷದ ಮಗು ಸಾವನ್ನಪ್ಪಿದ್ದರೆ, ಅಸ್ವಸ್ಥ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಕ್ಷಿತ್ ಗೌಡ(3) ಸಾವನ್ನಪ್ಪಿದ ದುರ್ದೈವಿ ಮಗು. ಪೂರ್ಣಿಮಾ ಪೂರ್ಣಿಮಾ(24) ಮಗುವಿಗೆ ವಿಷವುಣಿಸಿದ ತಾಯಿ.
ಆತ್ಮಹತ್ಯೆಗೆ ಯತ್ನಿಸಿರುವ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ, ಮಗು ಸತತ ವಾಂತಿ-ಭೇದಿಯಿಂದ ಸಾವನ್ನಪ್ಪಿದೆ. ತಾಯಿ ಚಿಕಿತ್ಸೆ ಪಡೆಯುತ್ತಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.