ನವದೆಹಲಿ: ದೇಶದ ಆರ್ಥಿಕತೆ ಊಹೆಗೂ ಮೀರಿ ಸಾಗುತ್ತಿದೆ. ಶ್ವದ ಪ್ರಮುಖ ಆರ್ಥಿಕತೆಯ ದೇಶಗಳ ಪೈಕಿ ಭಾರತ ಅತಿವೇಗದ ಬೆಳವಣಿಗೆ ಹೊಂದುತ್ತಿದೆ. ಮುಂದಿನ ಎರಡು ವರ್ಷ ಅವಧಿಯಲ್ಲಿ ಶೇ. 6ಕ್ಕಿಂತಲೂ ಹೆಚ್ಚು ವೇಗದಲ್ಲಿ ಭಾರತದ ಆರ್ಥಿಕತೆ ಬೆಳೆಯಲಿದೆ ಎನ್ನಲಾಗುತ್ತಿದೆ.
2027ರಷ್ಟರಲ್ಲಿ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ದೇಶವಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ. ಅತಿದೊಡ್ಡ ಆರ್ಥಿಕತೆಯಲ್ಲಿ ವಿಶ್ವದ 5ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಭಾರತದ ಜಿಡಿಪಿ 4 ಟ್ರಿಲಿಯನ್ ಡಾಲರ್ ದಾಟಿದೆ ಎನ್ನಲಾಗುತ್ತಿದ್ದು, 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿ ಒಂದೆರಡು ವರ್ಷಗಳಲ್ಲಿ ಈಡೇರಬಹುದು ಎನ್ನಲಾಗುತ್ತಿದೆ.
ಅಮೆರಿಕ ಸದ್ಯ ವಿಶ್ವದ ಅತಿದೊಡ್ಡ ಆರ್ಥಿಕತೆ ಹೊಂದಿದ್ದು, ಚೀನಾ ನಂತರದ ಸ್ಥಾನದಲ್ಲಿದೆ. ಜರ್ಮನಿ ಮತ್ತು ಜಪಾನ್ ದೇಶಗಳ ನಂತರದ ಸ್ಥಾನದಲ್ಲಿ ಭಾರತ ಇತ್ತು. ಆದರೆ, ಸದ್ಯ ಜರ್ಮನಿ ಹಾಗೂ ಜಪಾನ್ನ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿದೆ. ಭಾರತವು ಜಪಾನ್ನ ಜಿಡಿಪಿ ಹಿಂದಿಕ್ಕಿದೆ ಎಂದು ತಜ್ಞರು ಹೇಳುತ್ತಿದ್ದಾರೆ.