ಬೊಮ್ಮಾಯಿ ಸರಕಾರದಲ್ಲಿ ಹೊಸಬರಿಗೆ ಸಚಿವ ಸ್ಥಾನ? Saaksha Tv
ಬೆಂಗಳೂರು: ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಬೇಕೆಂದು ಬಿಜೆಪಿ BJP ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಬಿಜೆಪಿ ಮೂಲಗಳ ಪ್ರಕಾರ ಎಪ್ರಿಲ್ ವೇಳೆಗೆ ರಾಜ್ಯದಲ್ಲಿ ಆಗಲಿದೆ, ಮುಂದಿನ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಬಿಜೆಪಿಯ ಬಿಗ್ ಬಾಸ್ ಗಳು ಹೊಸಬರಿಗೆ ಮಣೆ ಹಾಕುವ ಸಾಧ್ಯತೆಗಳಿವೆ.
Basavaraj Bommai
ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಕೆಲ ಶಾಸಕರು ಬಂಡಾಯ ಎದ್ದಿದ್ದು. ಶ್ರೀಘ್ರದಲ್ಲೆ ಸಚಿವ ಸಂಪುಟ ವಿಸ್ತರಣೆಯಾಗಬೇಕು. ನಮಗೆ ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಈಗಾಗಲೇ ಸಚಿವ ಸ್ಥಾನದಲ್ಲಿರುವ ಹಿರಿಯರು ತಾವಾಗಿಯೇ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡುವ ಮೂಲಕ ಹೊಸಬರಿಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಪೈಕಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ, ವಿಜಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಚಿತ್ರದುರ್ಗ ಎಂಎಲ್ ಎ ರಾಜುಗೌಡ ಗುಪ್ತ ಗುಪ್ತ ಸಭೆಗಳನ್ನ ನಡೆಸುತ್ತಿದ್ದಾರೆ.
ಆದರೆ ಈಗ ಈ ವಿಷಯ ಮೂಲ ಬಿಜೆಪಿಗರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. 2019ರಲ್ಲಿ ಬಿಜೆಪಿ ಸರಕಾರ ರಚಿಸಲು ಕಾಂಗ್ರೆಸ್ ನಿಂದ ವಲಸೆ ಬಂದವರಿಗೆ ಸಚಿವ ಸ್ಥಾನ ನೀಡಿದ್ದರು. ಆಗ ಮೂಲ ಬಿಜೆಪಿಗರು ಸರಕಾರ ರಚನೆ ಕಾರಣಕ್ಕೆ ಸುಮ್ಮನಾಗಿದ್ದರು. ಆದರೆ ಈಗ ವಿಷಯ ತಿಳಿದು ಒಳ-ಒಳಗೆ ಕುದಿಯುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಈ ತರಹದ ಬೆಳವಣಿಗೆ ಬಿಜೆಪಿಗೆ ಬಾರಿ ಹೊಡೆತ ಬೀಳುವ ಸಾಧ್ಯತೆ ಇದೆ.