ಉಡುಪಿ: ಜಿಲ್ಲೆಯಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಬಾಣಸಿಗನ ಸಾವಿನ ಪ್ರಕರಣ ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಬಿಯರ್ ಬಾಟಲಿಯಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೇರಳದ (Kerala) ಕಾಸರಗೋಡು ಮೂಲದ ಬಾಣಸಿಗ ಶ್ರೀಧರ್ ಮೃತದೇಹ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿತ್ತು. ಹೀಗಾಗಿ ಕುತ್ತಿಗೆಗೆ ಬಾಟಲಿಯಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದರು. ಆದರೆ, ಸದ್ಯ ಸಿಸಿ ಟಿವಿ ಕ್ಯಾಮೆರಾ ಪರಿಶೀಲನೆಯ ನಂತರ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯ ಬಳಿ ಯಾರು ಹಾದು ಹೋಗಿಲ್ಲ, ಹಲ್ಲೆ ಕೂಡ ಮಾಡಿಲ್ಲ. ಹೀಗಾಗಿ ಆತನೇ ಬಿಯರ್ ಬಾಟಲಿಯಿಂದ ಇರಿದುಕೊಂಡು ಸತ್ತಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸಾವನ್ನಪ್ಪಿರುವ ಶ್ರೀಧರ್ ವಿಪರೀತ ಮದ್ಯವ್ಯಸನಿಯಾಗಿದ್ದ. ಈತ ಮಣಿಪಾಲದ ಹೋಟೆಲ್ವೊಂದರಲ್ಲಿ ಬಾಣಸಿಗನಾಗಿದ್ದ. ಆದರೆ, ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.