ವಿಜಯಪುರ: ನವವಿವಾಹಿತ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಈ ಜೋಡಿ ವಿವಾಹವಾಗಿತ್ತು ಎನ್ನಲಾಗಿದ್ದು, ಈ ಘಟನೆ ವಿಜಯಪುರ ಜಿಲ್ಲೆಯ ಹೊರ ವಲಯದಲ್ಲಿ ನಡೆದಿದೆ. ಮನೋಜ್ ಕುಮಾರ್ ಪೋಳ (30), ರಾಖಿ (23) ಆತ್ಮಹತ್ಯೆಗೆ ಶರಣಾದ ಜೋಡಿ.
ಈ ಜೋಡಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮನೆಯಲ್ಲಿದ್ದ ಕುಟುಂಬಸ್ಥರು ರಾತ್ರಿ ವೇಳೆ ಊಟ ಮಾಡಿ ಮಲಗಿದ ಮೇಲೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮನೋಜ್ ಕುಮಾರ್ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದರು. ಮರಳಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.