ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ – ವರದಕ್ಷಿಣೆ ಕಿರುಕುಳ ಆರೋಪ…
4 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರು ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ.
26 ವರ್ಷದ ಅಂಜು ಅಂಜನ್ ಹತ್ಯಗೆ ಶರಣಾದ ಮಹಿಳೆ, ಮೃತ ಮಹಿಳೆ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿಯ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದರು. ಅಂಜನ್ ಕಣಿಯಾರ್ (28) ಎಂಬಾತನನ್ನ ನಾಲ್ಕು ತಿಂಗಳ ಹಿಂದಯಷ್ಟೆ ಮದುವೆಯಾಗಿದ್ದರು.
ಅಂಜು ಮತ್ತು ಅಂಜನ್ ಪರಸ್ಪರ ಪ್ರೀತಿಸಿ ಪೋಷಕರನ್ನ ಮದುವೆಯಾಗಿದ್ದರು. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಂಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರಿಗೆ ತಿಳಿದಿಬಂದಿದೆ.
ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಲಾಗಿತ್ತು ಎಂದು ಅಂಜು ಪೋಷಕರು ಆರೋಪಿಸಿದ್ದಾರೆ. ಅಂಜು ಮೃತದೇಹ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡೂರು ತಾಲ್ಲೂಕು ಬೋಳನಹಳ್ಳಿಯ ರವಿಕುಮಾರ್ ಹೇಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಅಂಜು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಇ ಮಾಡಿದ್ದರು. ಕಳೆದ ಐದು ವರ್ಷಗಳಿಂದ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ರು.








