ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಭೀತಿಯಿಂದ ಕಳ್ಳತನ ಕಡಿಮೆ ಆಗಿರುವ ಸುದ್ದಿ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಭಯಕ್ಕೆ ಕಳ್ಳತನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯಭಾಗದಲ್ಲಿರುವ ಮೆಜೆಸ್ಟಿಕ್, ಉಪ್ಪಾರಪೇಟೆ, ಕೆಆರ್ ಮಾರ್ಕೆಟ್ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ಅತೀ ಹೆಚ್ಚು ದಾಖಲಾಗುತ್ತಿದ್ದವು. ಮೊಬೈಲ್ ಕಳ್ಳತನ, ಪಿಕ್ ಪಾಕೆಟ್ ಹೀಗೆ ಬಸ್ ನಿಲ್ದಾಣದಲ್ಲಿ ಹಲವಾರು ಪ್ರಕರಣಗಳು ದಾಖಲು ಆಗುತ್ತಿದ್ದವು. ಆದರೆ ಕೊರೊನಾ ಎಫೆಕ್ಟ್ ನಿಂದಾಗಿ ಕಳ್ಳತನದ ಪ್ರಕರಣಗಳು ಅರ್ಧಕ್ಕೆ ಅರ್ಧದಷ್ಟು ಕಡಿಮೆಯಾಗಿವೆ. ಜನರು ಮನೆಯಿಂದ ಹೊರ ಬರುತ್ತಿಲ್ಲ. ಅಲ್ಲದೆ ಕಳ್ಳರು ಸಹ ಕೊರೊನಾ ವೈರಸ್ ಗೆ ಭಯಗೊಂಡಿರುವುದ ಕಂಡು ಬಂದಿದೆ. ಮೆಜೆಸ್ಟಿಕ್ ಸುತ್ತಾ ಮುತ್ತಾ ಮಾತ್ರವಲ್ಲ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಕಳ್ಳತನದ ಪ್ರಕರಣಗಳು ಕಡಿಮೆ ಆಗಿವೆ ಎಂದು ಡಿಸಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.








