ಹಾಸನ: ಪಾರ್ಕಿಂಗ್ ವಿಚಾರದಲ್ಲಿ ಮಹಿಳೆಯ ಮೇಲೆ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೇಲೂರಿನ (Belur) ಚೆನ್ನಕೇಶವ ದೇವಾಲಯದ (Chennakeshava Temple) ಆವರಣದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದರಿಂದಾಗಿ ಅವರ ಮುಖಕ್ಕೆ ಗಾಯಗಳಾಗಿವೆ. ಈ ಸಂದರ್ಭದಲ್ಲಿ ಮಧ್ಯೆ ಪ್ರವೇಸಿಸಿದ ಮಹಿಳೆಯ ಮಗನ ಮೇಲೆಯೂ ಹಲ್ಲೆ ಮಾಡಲಾಗಿದೆ. ದಾವಣಗೆರೆ ಮೂಲದ ವೀಣಾ ಬಸವರಾಜು ಮೇಲೆಯೇ ಹಲ್ಲೆ ನಡೆಸಿದ್ದು, ಈ ಫೋಟೋ ವೈರಲ್ ಆಗಿದೆ.
ವೀಣಾ ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಪುತ್ರ ಕಾರನ್ನು ಪಾರ್ಕ್ ಮಾಡುತ್ತಿದ್ದ. ಅವಾಚ್ಯ ಶಬ್ದಗಳಿಂದ ಕೂಡ ನಿಂದಿಸಿದ್ದಾನೆ. ಮಹಿಳೆ ಆಸ್ಪತ್ರೆಗೆ ದಾಖಲಾಗಿ ಹೊಲಿಗೆ ಹಾಕಿಸಿಕೊಂಡಿದ್ದಾರೆ. ಪ್ರವಾಸೋದ್ಯಮ ಇಲಾಖೆ (Tourism Department) ಖಾಸಗಿ ವ್ಯಕ್ತಿಗೆ ಪಾರ್ಕಿಂಗ್ ವ್ಯಸ್ಥೆಗೆ ಜಾಗವನ್ನು ಗುತ್ತಿಗೆ ನೀಡಿದೆ. ಪ್ರವಾಸಿಗರ ಮೇಲೆ ಹಲ್ಲೆಯಾದರೂ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.