ಬೆಂಗಳೂರು : ಮೆಟ್ರೋ ಹಳಿಗೆ ವ್ಯಕ್ತಿಯೊಬ್ಬ ಜಿಗಿದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ನಮ್ಮ ಮೆಟ್ರೋ ಹಸಿರು ಮಾರ್ಗದ (Namma Metro Green Line) ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ (Jalahalli Metro Station) ಈ ಘಟನೆ ನಡೆದಿದೆ.
ಇಂದು ಸಂಜೆ 7 ಗಂಟೆ ಸುಮಾರು ಈ ಘಟನೆ ನಡೆದಿದ್ದು, ಹಳಿಗೆ ಹಾರಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ಲಾಟ್ ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದಿದ್ದಾರೆ. ಕೂಡಲೇ ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಇತರ ನಿಲ್ದಾಣದ ಪ್ಲಾಟ್ ಫಾರ್ಮ್ ಗಳಲ್ಲಿ ಸ್ಥಗಿತಗೊಂಡ 4 ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರಗೆ ತರಲಾಯಿತು.
45 ನಿಮಿಷಗಳ ಕಾಲ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿ 8.00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.








