ಗದಗ: ರಥದ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಸವೇಶ್ವರ ಜಾತ್ರೆಯ (Basaveshwar Jatre) ರಥೋತ್ಸವ ಸಂದರ್ಭದಲ್ಲಿಯೇ ಈ ಅವಘಡ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯಲ್ಲಪ್ಪಗೌಡ (42) ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಯಲ್ಲಪ್ಪಗೌಡ ಅವರು ರಥ ಎಳೆಯುವ ಸಂದರ್ಭದಲ್ಲಿ ಅವರ ಮೈ ಮೇಲೆ ರಥದ ಗಾಲಿ ಹರಿದಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.