ರಾಯಚೂರು: ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಸ್ಕಿ (Maski) ತಾಲೂಕಿನ ಗುಡದೂರು ಹತ್ತಿರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಗಿರೀಶ್(45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಳಗಾನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.








