ಬೆಂಗಳೂರು: ನಾಲ್ವರು ದುಷ್ಕರ್ಮಿಗಳು ತಡರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಪುಲಕೇಶಿಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಸ್ಗರ್ ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಇತ ಗುಜರಿ ಅಂಗಡಿ ವ್ಯವಹಾರ ನಡೆಸುತಿದ್ದ ಎಂದು ತಿಳಿದು ಬಂದಿದೆ. ಹಣಕಾಸು ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪುಲಕೇಶಿ ನಗರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.