ಗಾಂಧಿನಗರ: ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಸೇರಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಈ ಮಧ್ಯೆ ಸೋಮವಾರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ (Nilesh Kumbhani) ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅವರ ಮನೆಗೂ ಬೀಗ ಹಾಕಿದ್ದು, ಫೋನ್ ಸ್ವಿಚ್ ಆಫ್ ಆಗಿದೆ. ಹೀಗಾಗಿ ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿದೆ. ನೀಲೇಶ್ ಕುಂಭಾವಿ ಬಿಜೆಪಿ ಸೇರಬಹುದು ಎಂಬ ಸುದ್ದಿ ಹಬ್ಬಿದೆ. ಇದರಿಂದ ಸ್ಥಳೀಯ ಕಾಂಗ್ರೆಸ್ಸಿಗರು ಫುಲ್ ಗರಂ ಆಗಿದ್ದಾರೆ. ನೀಲೇಶ್ ದ್ರೋಹಿ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮುಕೇಶ್ ಗೆದ್ದಿದ್ದಾರೆ ಎಂದು ಈಗಾಗಲೇ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಮಾಣ ಪತ್ರ ಕೂಡ ಕೊಟ್ಟಿದ್ದಾರೆ. 1989ರ ಚುನಾವಣೆಯ ಬಳಿಕ ಈ ಕ್ಷೇತ್ರದಲ್ಲಿ ಬಿಜೆಪಿ ಸೋತಿಲ್ಲ. 2019ರ ಚುನಾವಣೆಯಲ್ಲಿ ಬಿಜೆಪಿ 5.48 ಲಕ್ಷ ಮತಗಳ ಅಂತರದಿಂದ ಗೆದ್ದಿತ್ತು.