ಕಾರವಾರ: ವ್ಯಕ್ತಿಯೊಬ್ಬ ಈಜಲು ತೆರಳಿ ನೀರುಪಾಲಾದ ಘಟನೆ ನಡೆದಿದೆ.
ಸಮುದ್ರದಲ್ಲಿ (Sea) ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ. ಕುಮಟಾದ (Kumta) ಬಾಡದಲ್ಲಿ ಈ ಘಟನೆ ನಡೆದಿದೆ. ಇನ್ನೊಂದೆಡೆ ಮುರ್ಡೇಶ್ವರದಲ್ಲಿ (Murdeshwar) ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಶಿವಮೊಗ್ಗ (Shivamogga) ಮೂಲದ ಪ್ರಶಾಂತ್ ಗುಪ್ತ ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಈ ವ್ಯಕ್ತಿ 11 ಜನರೊಂದಿಗೆ ಆಗಮಿಸಿದ್ದ. ಈ ಕುರಿತು ಕುಮಟಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರ್ಡೇಶ್ವರದಲ್ಲಿ ಬಾಗಲಕೋಟೆಯಿಂದ ಬಂದಿದ್ದ ಮೂವರು ಪ್ರವಾಸಿಗರು ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ದಸರಾ ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.