ಕಲಬುರಗಿ: ವ್ಯಕ್ತಿಯೊಬ್ಬರು ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಘಟನೆ ಕಲಬುರಗಿ (Kalaburagi) ಜಿಲ್ಲೆ ಕಮಲಾಪುರ ತಾಲೂಕಿನ ಪಟವಾದ ತಾಂಡಾದಲ್ಲಿ ನಡೆದಿದೆ. ಕಿಶನ್ ಚೌವ್ಹಾಣ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈ ವ್ಯಕ್ತಿ ತಮ್ಮದೇ ಜಮೀನಿನಲ್ಲಿ ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 1.4 ಲಕ್ಷ ರೂ. ಮೌಲ್ಯದ 2.15 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಮಲಾಪುರ (Kamalapura) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.