ಬೆಂಗಳೂರು: ಪಾಪಿ ಪತಿಯೊಬ್ಬ ತನ್ನ ಸ್ನೇಹಿತರೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತಿ ಮೆರೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಗೆ ಹಿಂಸೆ ನೀಡುತ್ತಿದ್ದ ಎನ್ನಲಾಗಿತ್ತು, ಈ ಕುರಿತು ಅಮೃತಹಳ್ಳಿ (Amrithhalli) ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಈ ವಿಕೃತ ಬೇಡಿಕೆಯನ್ನು ನಿರಾಕರಿಸಿದ್ದಕ್ಕೆ ಹಲ್ಲೆ ಕೂಡ ಮಾಡಿದ್ದಾನೆ ಎನ್ನಲಾಗದೆ. ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ಪತ್ನಿ ಆರೋಪಿಸಿದ್ದು, ಈಗ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.
ಮಂಗಳೂರು ಮೂಲದ ವಿಕೃತ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ಮೂರು ಜನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಕೆ ಕೈಗೊಂಡಿದ್ದಾರೆ.