ತುಮಕೂರು: ಪತಿ ಹಾಗೂ ಪತ್ನಿಯ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಈ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ (Huliyurdurga) ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32) ಕೊಲೆಯಾದ ಗೃಹಿಣಿ. ಹುಲಿಯೂರುದುರ್ಗ ಹತ್ತಿರದ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತ ಕೃತ್ಯ ಎಸಗಿದ್ದಾನೆ.
ಪತಿ ಹಾಗೂ ಪತ್ನಿಯ ಮಧ್ಯೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಶಿವರಾಮ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬುವವರನ್ನು ವಿವಾಹವಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಮರದ ಮಿಲ್ಲೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ತೆರಳಿ, ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೇ, ಪತ್ನಿಯ ದೇಹಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.