ಯಾದಗಿರಿ : ಪೊಲೀಸ್ ಪೇದೆಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ರಜೆಯಲ್ಲಿದ್ದ ವೇಳೆ ಪೊಲೀಸ್ ಕಾನ್ಸ್‌ಟೇಬಲ್ (Police Constable)ಗೆ ಹೃದಯಾಘಾತವಾಗಿದೆ. ಈ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಸಾವನ್ನಪ್ಪಿದ ಪೊಲೀಸ್ ಪೇದೆ. ದೇವೇಂದ್ರಪ್ಪ ಅವರು ಕಳೆದ ಕೆಲವು ತಿಂಗಳುಗಳಿಂದ ಜ್ವರದಿಂದಾಗಿ ಬಳಲುತ್ತಿದ್ದರು. ಹೀಗಾಗಿ ಜೂನ್ ನಲ್ಲಿ ರಜೆ ಪಡೆದಿದ್ದರು. ಬುಧವಾರ ಬೆಂಗಳೂರಿನ (Bengaluru) ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲಿ ಮಾರ್ಗಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೂಲತಃ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.