ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿ ಮಾಲೀಕರಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಬಿಐ ಬಲೆಗ ಬಿದ್ದಿದ್ದಾರೆ.
ಮಂಗೋಲ್ಪುರಿ ಪ್ರದೇಶದಲ್ಲಿ ಲಂಚ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿ ಪರಾರಿಯಾಗಲು ಯತ್ನಿಸಿದ್ದಾರೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೆಹಲಿಯ ಮಂಗೋಲ್ ಪುರಿ ಪ್ರದೇಶದಲ್ಲಿನ ಅಂಗಡಿ ಬಳಿ ವ್ಯಕ್ತಿಯೊಬ್ಬರು ವಾಹನವನ್ನು ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದಕ್ಕಾಗಿ ಹೆಡ್ ಕಾನ್ಸ್ಟೆಬಲ್ ಅಂಗಡಿ ಮಾಲೀಕರಿಗೆ 50 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಹೀಗಾಗಿ ಅಂಗಡಿ ಮಾಲೀಕ ಸಿಬಿಐ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಪೊಲೀಸರ ಬೇಡಿಕೆಯಿಂದ ಅಸಮಾಧಾನಗೊಂಡಿದ್ದ ಅಂಗಡಿಯವರ ಸಿಬಿಐ ಸಹಾಯ ಕೇಳಿದ್ದ.
ಅಂಗಡಿಯ ಮಾಲೀಕರ ದೂರಿಗೆ ಸಿಬಿಐ ತ್ವರಿತವಾಗಿ ಸ್ಪಂದಿಸಿ ತನಿಖೆಗೆ ಕಾರ್ಯಾಚರಣೆ ನಡೆಸಿತು. ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿ ಭೀಮ್ ಸಿಂಗ್ ರನ್ನು ಸಿಬಿಐ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆಯಲು ಯತ್ನಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದರು. ಸದ್ಯ ಅವರ ವಿರುದ್ಧ ಲಂಚ ಪ್ರಕರಣ ದಾಖಲಾಗಿದೆ.