ಚಿತ್ರದುರ್ಗ : ದೇಶದಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಎಲ್ಲಡೆ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ಫುಲ್ ಖುಷಿಯಾದ ಪೊಲೀಸ್ ಪೇದೆ ಕರ್ತವ್ಯ ಮರೆತು ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಪಲ್ಲವಗೆರೆ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ರಾಜು ಚವ್ಹಾಣ್ ಅವರನ್ನು ಲಾಕ್ ಡೌನ್ ಸಡಲಿಕೆಯಿಂದಾಗಿ ನಿನ್ನೆ ಪಲ್ಲವಗೆರೆ ಗ್ರಾಮದ ಸುತ್ತ ಬೀಟ್ ಗೆ ಹಾಕಲಾಗಿತ್ತು. ಅದರಂತೆ ಕರ್ತವ್ಯ ನಿರ್ವಹಿಸಲು ಹೋಗಿದ್ದ ರಾಜು ಈರುಳ್ಳಿ ಜಮೀನಿನ ಮರದ ಕೆಳಗೆ ಕುಳಿತು ಗ್ರಾಮದ ಸ್ನೇಹಿತರ ಜೊತೆ ಪೊಲೀಸ್ ಸಮವಸ್ತ್ರದಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ವಿಡಿಯೋದಲ್ಲಿ ಪೊಲೀಸ್ ಪೇದೆ ಕುಡಿದು ಅಲ್ಲಿನ ಯುವಕರಿಗೆ ಕಾನೂನಿನ ಪಾಠ ಮಾಡಿದ್ದಾರೆ. ನಿವೃತ್ತ ಯೋಧರಾಗಿರುವ ರಾಜು, 2017ರಲ್ಲಿ ಸೇನೆಯಿಂದ ಬಂದು ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ಹೇಳಲಾಗುತ್ತಿದೆ.








