ಪೊಲೀಸ್ ಮುಖ್ಯ ಪೇದೆಯೊಬ್ಬರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಆಂಧ್ರಪ್ರದೇಶದಲ್ಲಿ ವರದಿಯಾಗಿದೆ.
ವೈಯಕ್ತಿಕ ಕಾರಣಗಳಿಂದಾಗಿ ಈ ಕೃತ್ಯ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿಯ ಕಡಪಾ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ವೆಂಕಟೇಶ್ವರಲು ಎಂದು ಗುರುತಿಸಲಾಗಿದೆ.
ರಾತ್ರಿ 11ಕ್ಕೆ ಕೆಲಸ ಮುಗಿಸಿ ಮನೆಗೆ ತೆರಳಿದ ನಂತರ ವೆಂಕಟೇಶ್ವರಲು ಪಿಸ್ತೂಲ್ ಹಾಗೂ ಗುಂಡುಗಳನ್ನು ಮನೆಗೆ ಒಯ್ದಿದ್ದಾರೆ. ಕೆಲವು ಕೌಟುಂಬಿಕ ಸಮಸ್ಯೆ ಹಾಗೂ ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಇವರ ಪತ್ನಿಗೆ 45 ವರ್ಷ ವಯಸ್ಸಾಗಿದ್ದು, ಮೊದಲ ಮಗಳು ಪದವಿ ಹಾಗೂ ಎರಡನೇ ಮಗಳು 10ನೇ ತರಗತಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.