ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಕುಂತಲಾ, ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಪೋಸ್ಟ್ ಮಾಡಿದ್ದರು.
ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ಎಫ್ ಐಆರ್ ದಾಖಲಾಗಿರುವುದು ಗೊತ್ತಾಗಿ ಶಕುಂತಲಾ ಮತ್ತೆ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಯತ್ನಾಳ್, ನಿಮ್ಮೊಂದಿಗೆ ನಾವಿದ್ದೇವೆ ಎಂದಿದ್ದಾರೆ.