ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅಕ್ಕಿ ನೀಡಲು ನಿರ್ಧರಿಸಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಜೊತೆ ಚರ್ಚಿಸಲಾಗಿದೆ. ಸದ್ಯದಲ್ಲಿಯೇ ಸಿಎಂ ಜೊತೆ ಚರ್ಚಿಸಲು ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ಹೇಳಿದ್ದಾರೆ.
ರಾಜ್ಯಕ್ಕೆ ಬೇಕಿರುವ ಅಗತ್ಯ ಅಕ್ಕಿಯನ್ನು (Rice) ಕೊಡುವ ಭರವಸೆ ಕೇಂದ್ರ ಸಚಿವರು ನೀಡಿದ್ದಾರೆ. ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ನಾನು ಸಿಎಂ ಮತ್ತು ಅಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಹಿಂದೆ ಕೇಂದ್ರ ಅಕ್ಕಿ ಕೊಡದಿದ್ದಾಗ ಹಣ ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆ ವಿತರಿಸಬೇಕೆಂದು ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಕುರಿತು ಮನವಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಎಸ್ಸಿ, ಎಸ್ಟಿ ಒಳ ಮೀಸಲಾತಿ ನೀಡುವ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ಆದೇಶವನ್ನು ನಾನು ಸ್ವಾಗತ ಮಾಡುತ್ತೇನೆ. 30 ವರ್ಷಗಳ ಕಾಲ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸುತ್ತಿದ್ದವು. ಈ ಮೂಲಕ ಎಲ್ಲ ಜಾತಿಗಳಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಹೇಳಿದ್ದಾರೆ.